ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಪಿಜಿ 2023: ಫಲಿತಾಂಶ ಪ್ರಕಟ

Last Updated 14 ಮಾರ್ಚ್ 2023, 22:39 IST
ಅಕ್ಷರ ಗಾತ್ರ

ನವದೆಹಲಿ: ನೀಟ್‌ ಪಿಜಿ 2023 ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಮಾರ್ಚ್ 5ರಂದು ದೇಶದ ವಿವಿಧ 902 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 2,08,898 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯು (ಎನ್‌ಬಿಇಎಂಎಸ್‌) ದಾಖಲೆಯ 10 ದಿನದಲ್ಲಿ ಫಲಿತಾಂಶ ಪ್ರಕಟಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಹೇಳಿದ್ದಾರೆ.

‘ಇಂದು ಫಲಿತಾಂಶ ಪ್ರಕಟಿಸಲಾಗಿದೆ. ಅರ್ಹತೆ ಪಡೆದಿರುವ ಎಲ್ಲರಿಗೂ ಅಭಿನಂದನೆಗಳು. ದಾಖಲೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಿದ ಮಂಡಳಿಗೆ ಅಭಿನಂದಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT