ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.12 ರಿಂದ ನೀಟ್‌–ಪಿಜಿ ಕೌನ್ಸೆಲಿಂಗ್ ಆರಂಭ: ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ

Last Updated 9 ಜನವರಿ 2022, 9:23 IST
ಅಕ್ಷರ ಗಾತ್ರ

ನವದೆಹಲಿ: 2021-2022ರ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಕೌನ್ಸೆಲಿಂಗ್‌ (ನೀಟ್‌–ಪಿಜಿ ಕೌನ್ಸೆಲಿಂಗ್) ಜನವರಿ 12 ರಿಂದ ಆರಂಭವಾಗಲಿದೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ, ‘ಸುಪ್ರೀಂ ಕೋರ್ಟ್‌ ಆದೇಶದ ನಂತರ ನೀಟ್‌–ಪಿಜಿ ಕೌನ್ಸೆಲಿಂಗ್ ಅನ್ನು ಜನವರಿ 12 ರಿಂದ ಆರಂಭಿಸಲು ಆರೋಗ್ಯ ಸಚಿವಾಲಯವು ನಿರ್ಧರಿಸಿದೆ’ ಎಂದು ತಿಳಿಸಿದ್ದಾರೆ.

‘ಇದು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ದೇಶವನ್ನು ಬಲಪಡಿಸುತ್ತದೆ. ಎಲ್ಲಾ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು’ ಎಂದು ಮಾಂಡವಿಯಾ ಹೇಳಿದ್ದಾರೆ.

ನೀಟ್‌–ಪಿಜಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘ತುರ್ತು ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿತ್ತು.

ಈ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ₹8 ಲಕ್ಷ ವಾರ್ಷಿಕ ಆದಾಯ ಮಿತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇಡಬ್ಲ್ಯೂಎಸ್‌) ನೀಡಲಾದ ಮೀಸಲಾತಿ ಮೊದಲಿನಂತೆಯೇ ಇರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT