ನೀಟ್ ಪಿಜಿ ಮುಂದೂಡಿಲ್ಲ; ಮೇ 21ರಂದೇ ಪರೀಕ್ಷೆ: ಪಿಐಬಿ ಹೇಳಿಕೆ

ನವದೆಹಲಿ: ಪ್ರಸಕ್ತ ಸಾಲಿನ ‘ನೀಟ್’ ಸ್ನಾತಕೋತ್ತರ ಪರೀಕ್ಷೆಯನ್ನು ಮುಂದೂಡಿಲ್ಲ. ಪರೀಕ್ಷೆಯು ನಿಗದಿಯಾಗಿರುವಂತೆ ಮೇ 21ರಂದೇ ನಡೆಯಲಿದೆ ಎಂದು ಕೇಂದ್ರ ವಾರ್ತಾ ಇಲಾಖೆ (ಪಿಐಬಿ) ಶನಿವಾರ ತಿಳಿಸಿದೆ.
‘ನೀಟ್ ಪಿಜಿ ಪರೀಕ್ಷೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ ಎಂಬುದಾಗಿ ರಾಷ್ಟ್ರೀಯ ಪರೀಕ್ಷಾ ಮಂಡಳಿ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಲಾಗುತ್ತಿದೆ. ಇಂತಹ ಸುಳ್ಳು ಮಾಹಿತಿ ಬಗ್ಗೆ ಅಭ್ಯರ್ಥಿಗಳು ಎಚ್ಚರವಹಿಸಬೇಕು’ ಎಂದು ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ (ಎನ್ಬಿಇಎಂಎಸ್) ಕೂಡ ತಿಳಿಸಿದೆ.
‘ಮಂಡಳಿ ನಡೆಸುವ ವಿವಿಧ ಪರೀಕ್ಷೆಗಳು ಹಾಗೂ ಇತರ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ https://natboard.edu.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ’ ಎಂದೂ ಎನ್ಬಿಇಎಂಎಸ್ ಸ್ಪಷ್ಟಪಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.