ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗದಿಯಂತೆ ಮಾರ್ಚ್ 5ರಂದೇ ನೀಟ್‌–ಪಿಜಿ: ಮನ್ಸುಖ್‌ ಮಾಂಡವೀಯಾ

Last Updated 10 ಫೆಬ್ರುವರಿ 2023, 12:44 IST
ಅಕ್ಷರ ಗಾತ್ರ

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌–ಪಿಜಿ) ನಿಗದಿಯಂತೆ ಮಾರ್ಚ್‌ 5ರಂದು ನಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯಾ ಅವರು ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯ ಗೌರವ್‌ ಗೊಗೋಯಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಯಾರೂ ಪರೀಕ್ಷೆಯಿಂದ ಹೊರಗುಳಿಯಬಾರದು ಎಂಬ ಕಾರಣಕ್ಕೆ ಸಚಿವಾಲಯವು, ಇಂಟರ್ನ್‌ಶಿಪ್‌ ಇನ್ನೂ ಪೂರ್ಣಗೊಳಿಸದ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಕಟ್‌ ಆಫ್‌ ದಿನಾಂಕವನ್ನು ವಿಸ್ತರಿಸಿದೆ’ ಎಂದೂ ಹೇಳಿದ್ದಾರೆ.

2023ರ ನೀಟ್‌–ಪಿಜಿಯನ್ನು ಕೆಲ ತಿಂಗಳವರೆಗೆ ಮುಂದೂಡಬೇಕೆಂಬ ವಿದ್ಯಾರ್ಥಿಗಳ ಬೇಡಿಕೆಯನ್ನು ಗೌರವ್‌ ಅವರು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಂಡವೀಯಾ ಅವರು ‘ಮಾರ್ಚ್‌ 5ರಂದೇ ಪರೀಕ್ಷೆ ನಡೆಸಲಾಗುವುದು. ಐದು ತಿಂಗಳ ಮುಂಚೆಯೇ ಈ ಕುರಿತು ಘೋಷಿಸಲಾಗಿತ್ತು. ಇದಕ್ಕಾಗಿ ಪರೀಕ್ಷಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT