ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳ ಉಡುಪು ತೆಗೆಸಿದ ಪ್ರಕರಣ: ಪರೀಕ್ಷಾ ಮೇಲ್ವಿಚಾರಕರಿಬ್ಬರ ಬಂಧನ

Last Updated 21 ಜುಲೈ 2022, 11:29 IST
ಅಕ್ಷರ ಗಾತ್ರ

ಕೊಲ್ಲಂ (ಕೇರಳ): ‘ನೀಟ್‌’ ಬರೆಯುವ ಮುನ್ನ ವಿದ್ಯಾರ್ಥಿನಿಯೊಬ್ಬರ ಒಳ ಉಡುಪು ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಮೇಲ್ವಿಚಾರರಿಬ್ಬರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ‌

ವಿಚಾರಣೆಗೆ ಒಳಪಡಿಸಿದ ಬಳಿಕ ನೀಟ್‌ ವೀಕ್ಷಕ ಮತ್ತು ಪರೀಕ್ಷಾ ಸಂಯೋಜಕರನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 7ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷಾ ಕರ್ತವ್ಯದಲ್ಲಿದ್ದ ಐವರು ಮಹಿಳೆಯರನ್ನು ಮಂಗಳವಾರ ಬಂಧಿಸಲಾಗಿದೆ. ಬಂಧಿತರ ಪೈಕಿ ಮೂವರು ಎನ್‌ಟಿಎ ಗುತ್ತಿಗೆ ಪಡೆದಿದ್ದ ಸಂಸ್ಥೆಯೊಂದರ ಉದ್ಯೋಗಿಗಳು. ಇನ್ನಿಬ್ಬರು ಕೊಲ್ಲಂನ ಅಯುರ್‌ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದವರಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕೊಲ್ಲಂಗೆ ಭೇಟಿ ನೀಡಿ, ಪರಿಶೀಲಿಸಲು ಎನ್‌ಟಿಎ ಸತ್ಯಶೋಧನಾ ಸಮಿತಿ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT