ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್‌ನಲ್ಲಿ ನೇಫಿಯು ರಿಯೊ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

Last Updated 7 ಮಾರ್ಚ್ 2023, 9:43 IST
ಅಕ್ಷರ ಗಾತ್ರ

ಕೊಹಿಮಾ: ಗಡಿ ರಾಜ್ಯ ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‌ಡಿಪಿಪಿ) ನೇಫಿಯು ರಿಯೊ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ಲಾ. ಗಣೇಶನ್‌ ಅವರು ನೇಫಿಯು ರಿಯೊ ಅವರಿಗೆ ಪ್ರಮಾಣವಚನ ಬೋಧಿಸಿದರು. ಇವರ ಜೊತೆಗೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಪೈಕಿ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಮಾಣವಚನ ಸ್ವೀಕರಿಸಿದರು.

ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾಗವಹಿಸಿದ್ದರು.

ನಾಗಾಲ್ಯಾಂಡ್ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ 60 ಸದಸ್ಯ ಬಲದ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಜ್ಯದ ಎಲ್ಲಾ ಇತರ ಪಕ್ಷಗಳು ರಿಯೊ ನೇತೃತ್ವದ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಸೂಚಿಸಿವೆ.

ಎನ್‌ಡಿಪಿಪಿ 25, ಬಿಜೆಪಿ 12, ಎನ್‌ಪಿಎಫ್‌ 5, ಎನ್‌ಸಿಪಿ 7, ಲೋಕ ಜನಶಕ್ತಿ ಪಕ್ಷ (ರಾಮ್‌ ವಿಲಾಸ್) 2, ಕೇಂದ್ರ ಸಚಿವ ರಾಮದಾಸ್ ಆಠವಳೆ ನೇತೃತ್ವದ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿ) 2 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT