ಕೋಲ್ಕತ್ತ: ‘ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಅಂಶ ಹೊಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರಾಜ್ಯದಲ್ಲಿ ಸದ್ಯಕ್ಕೆ ಜಾರಿಗೊಳಿಸುವುದಿಲ್ಲ’ ಎಂದು ಸೋಮವಾರ ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ.
ಉನ್ನತ ಶಿಕ್ಷಣದಲ್ಲಿ ಎನ್ಇಪಿ ಜಾರಿಗೊಳಿಸುವ ಕುರಿತು ರಾಜ್ಯಪಾಲರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಟರ್ಜಿ, ‘ಶಾಸ್ತ್ರೀಯ ಭಾಷೆಗಳ ಸ್ಥಾನಮಾನದ ಪಟ್ಟಿಯಲ್ಲಿ ಬೆಂಗಾಲಿ ಭಾಷೆಯನ್ನು ಸೇರಿಸದಿರುವ ಕುರಿತು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದೇನೆ’ ಎಂದು ತಿಳಿಸಿದ್ದಾರೆ.
‘ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಎನ್ಇಪಿಯನ್ನು ಜಾರಿಗೊಳಿಸಲು ಅವಸರ ಇಲ್ಲ. ಈ ಬಗ್ಗೆ ತಜ್ಞರೊಂದಿಗೆ ಇನ್ನಷ್ಟು ಚರ್ಚೆಗಳು ನಡೆಯಬೇಕಿದೆ. ಎನ್ಇಪಿ ದೇಶದ ಒಕ್ಕೂಟ ವ್ಯವಸ್ಥೆ ಧಕ್ಕೆ ತರುವಂತಿದ್ದು, ರಾಜ್ಯಗಳ ಪಾತ್ರವನ್ನು ದುರ್ಬಲಗೊಳಿಸುವ ಅಂಶವನ್ನು ಹೊಂದಿದೆ. ಸದ್ಯಕ್ಕೆ ನಾವು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ತುರ್ತು ಇದೆ. ಎನ್‌ಇಪಿ ಜಾರಿಗೊಳಿಸುವ ತುರ್ತು ಈಗಿಲ್ಲ’ ಎಂದು ಚಟರ್ಜಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.