ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಿಷ್ಯದ ಬೇಡಿಕೆ ಅನುಸಾರ ಶಿಕ್ಷಣ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಿದ NEP: ಮೋದಿ

Last Updated 25 ಫೆಬ್ರವರಿ 2023, 6:36 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಭವಿಷ್ಯದ ಬೇಡಿಕೆಗಳಿಗೆ ಅನುಸಾರವಾಗಿ ದೇಶದ ಶಿಕ್ಷಣ ವ್ಯವಸ್ಥೆಗೆ ಪುನಶ್ಚೇತನ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಬಜೆಟ್‌ ಅದಿವೇಶನದ ಬಳಿಕ ನಡೆದ ವೆಬಿನಾರ್‌ನಲ್ಲಿ ಮಾತನಾಡಿದ ಮೋದಿ, ಈ ಹಿಂದೆ ಶಿಕ್ಷಣವು ಕಠಿಣ ವ್ಯವಸ್ಥೆಯ ಬಲಿಪಶುವಾಗಿತ್ತು ಎಂದಿದ್ದಾರೆ.

'ಎನ್‌ಇಪಿಯು ಭವಿಷ್ಯದ ಬೇಡಿಕೆಗಳಿಗೆ ಅನುಸಾರವಾಗಿ ಶಿಕ್ಷಣ ವ್ಯವಸ್ಥೆಗೆ ನಮ್ಯತೆ ಮತ್ತು ಪುನಶ್ಚೇತನವನ್ನು ತಂದುಕೊಟ್ಟಿದೆ' ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ಪಟ್ಟಿ ಮಾಡಿದ ಅವರು, ಇದು (ಬಜೆಟ್‌) ಭಾರತವನ್ನು ಕೌಶಲ್ಯದ ರಾಜಧಾನಿಯನ್ನಾಗಿಸುವ ಮಾರ್ಗಸೂಚಿ ಎಂದು ಪ್ರಶಂಸಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT