ಬುಧವಾರ, ಜನವರಿ 20, 2021
22 °C

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಸಹೋದರನ ಮಗಳು ಚಿತ್ರಾ ಘೋಷ್‌ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಸಹೋದರನ ಮಗಳು ಮತ್ತು ಖ್ಯಾತ ಶಿಕ್ಷಣ ತಜ್ಞೆ ಚಿತ್ರಾ ಘೋಷ್‌ (90) ಹೃದಯಾಘಾತದಿಂದ ಗುರುವಾರ ನಿಧನರಾದರು.

‘ಶರತ್ ಚಂದ್ರ ಬೋಸ್ ಅವರ ಕಿರಿಯ ಮಗಳು ಗುರುವಾರ ಬೆಳಿಗ್ಗೆ 10.30ಕ್ಕೆ ನಿಧನರಾದರು’ ಎಂದು ಚಿತ್ರಾ ಘೋಷ್‌ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್‌ ಬೋಸ್‌ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು, ‘ಪ್ರೊ. ಚಿತ್ರಾ ಘೋಷ್‌ ಅವರು ಶಿಕ್ಷಣ ಮತ್ತು ಸಮುದಾಯ ಸೇವೆಗಳಿಗೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಅವರ ನಿಧನದಿಂದ ಬಹಳ ಬೇಸರವಾಗಿದೆ’ ಎಂದು ಕಂಬನಿ ಮಿಡಿದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು