ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಕೃಷಿ ಕಾಯ್ದೆಯಿಂದ ಎಂಎಸ್‌ಪಿ, ಮಂಡಿ ವ್ಯವಸ್ಥೆ ದುರ್ಬಲ: ಪವಾರ್

Last Updated 31 ಜನವರಿ 2021, 2:51 IST
ಅಕ್ಷರ ಗಾತ್ರ

ಮುಂಬೈ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಗ್ರಹಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದ್ದು ಮಂಡಿ ವ್ಯವಸ್ಥೆಯನ್ನು ದುರ್ಬಲಗೊಳಿಸಲಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ಳಿಸಿದ್ದಾರೆ.

ವಿವಾದಿತ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿರುವ ರೈತರು, ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪವಾರ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

ಹೊಸ ಕೃಷಿ ಕಾನೂನುಗಳು ಖಾಸಗಿ ವ್ಯಾಪಾರಿಗಳಿಂದ ವಸೂಲಿ ಮತ್ತು ಶುಲ್ಕ ಸಂಗ್ರಹಣೆ, ವಿವಾದ ಪರಿಹಾರ, ಕೃಷಿ ವ್ಯಾಪಾರ ಪರವಾನಗಿ ಮತ್ತು ಇ-ವಹಿವಾಟಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಂಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನವೆಂಬರ್ 26ರಿಂದ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಭಾರಿ ಹಿಂಸಾಚಾರ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT