ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಇಆರ್‌ಟಿ: 2024–25ನೇ ಸಾಲಿನಿಂದ ಪರಿಷ್ಕೃತ ಪಠ್ಯಪುಸ್ತಕ

Last Updated 27 ಮಾರ್ಚ್ 2023, 14:40 IST
ಅಕ್ಷರ ಗಾತ್ರ

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‌ಇಪಿ) ಅನುಗುಣವಾಗಿ ಪರಿಷ್ಕರಿಸಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ಹೊಸ ಪಠ್ಯಪುಸ್ತಕಗಳನ್ನು 2024–25ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳಿಗೆ ಪರಿಚಯಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್‌) ಅಡಿಯಲ್ಲಿ ಈ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದೂ ಹೇಳಿದ್ದಾರೆ.

‘ಡಿಜಿಟಲ್‌ ಕಲಿಕೆಯ ಮಹತ್ವವು ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಅರಿವಾಗಿದೆ. ಎಲ್ಲಾ ಹೊಸ ಪಠ್ಯಪುಸ್ತಕಗಳು ಏಕಕಾಲದಲ್ಲಿ ಡಿಜಿಟಲ್‌ ರೂಪದಲ್ಲೂ ಲಭ್ಯವಾಗಲಿದೆ. ಯಾರು ಬೇಕಾದರೂ ಅವುಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ’ ಎಂದೂ ವಿವರಿಸಿದ್ದಾರೆ.

ಪಠ್ಯಪುಸ್ತಕಗಳು ಸ್ಥಿರವಾಗಿರಬಾರದು. ಅವುಗಳನ್ನು ನಿಯಮಿತವಾಗಿ ಪರಿಷ್ಕರಿಸುವುದನ್ನು ಖಚಿತಪಡಿಸಿಕೊಳ್ಳಲು ಸಾಂಸ್ಥಿಕ ಚೌಕಟ್ಟನ್ನು ರಚಿಸಲಾಗುವುದು ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT