ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಮುರ್ಮು ಪ್ರಮಾಣ ಇಂದು

Last Updated 24 ಜುಲೈ 2022, 20:02 IST
ಅಕ್ಷರ ಗಾತ್ರ

ನವದೆಹಲಿ: ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪ‍ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಬೆಳಿಗ್ಗೆ 10.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಮಾಣ ವಚನಕ್ಕೂ ಮುನ್ನ 21 ಸುತ್ತು ಗುಂಡು ಹಾರಾಟ ನಡೆಸಿ ಗೌರವ ವಂದನೆ
ಸಲ್ಲಿಸಲಾಗುವುದು.

ಪ್ರಮಾಣವಚನಕ್ಕೆ ಮುನ್ನ, ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಮತ್ತು ನೂತನ ರಾಷ್ಟ್ರಪತಿ ಮುರ್ಮು ಅವರು ವಿಧಿಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಬರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಹಾಗೂ ಇತರರು ಸಭೆಯಲ್ಲಿ
ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT