ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಉಗ್ರ ಸಂಘಟನೆಗೆ ನೆರವು; ನ್ಯೂಯಾರ್ಕ್‌ನ ವ್ಯಕ್ತಿಗೆ 15 ವರ್ಷ ಸೆರೆವಾಸ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್: ಪಾಕಿಸ್ತಾನ ಮೂಲದ ಲಷ್ಕರ್‌ ಎ ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಲು ಪ್ರಯತ್ನಿಸುತ್ತಿದ್ದ ನ್ಯೂಯಾರ್ಕ್‌ನ ವ್ಯಕ್ತಿಗೆ ಇಲ್ಲಿನ ನ್ಯಾಯಾಲಯ 15 ವರ್ಷಗಳ ಸೆರೆವಾಸ ಮತ್ತು ಉಗ್ರಸಂಘಟನೆಗೆ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ಮೂಲಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದ್ದ ಕಾರಣಕ್ಕಾಗಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಜೀಸಸ್ ವಿಲ್ಫ್ರೆಡೋ ಎನ್‌ಕಾರ್ನೇಶಿಯನ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನಿಗೆ ‘ಜಿಹಾದಿ ಸೋಲ್ಡ್ಜರ್‌’, ‘ಜಿಹಾದಿನ್‌ಹಿಯರ್‌’, ‘ಜಿಹಾದಿನ್‌ಹಾರ್ಟ್‌’ ಸೇರಿದಂತೆ ಹಲವು ಹೆಸರುಗಳು ಇವೆ.

2008ರ ನವೆಂಬರ್‌ನಲ್ಲಿ ನಡೆದಿದ್ದ ಮುಂಬೈ ದಾಳಿ ಸೇರಿದಂತೆ ಹಲವು ಉಗ್ರ ಕೃತ್ಯಗಳಿಗೆ ಈತ ನೆರವಾಗಿದ್ದ ಎಂದು ನ್ಯಾಯಾಂಗ ಇಲಾಖೆ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು