ಶನಿವಾರ, ನವೆಂಬರ್ 28, 2020
17 °C

ಬಿಹಾರ: ಎನ್‌ಡಿಎ ಶಾಸಕರ ಸಭೆ ಭಾನುವಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಎನ್‌ಡಿಎ ಶಾಸಕಾಂಗ ಪಕ್ಷದ ಜಂಟಿ ಸಭೆಯು ಭಾನುವಾರ ನಡೆಯಲಿದ್ದು, ಈ ವೇಳೆ ನಾಯಕರು ನಿತೀಶ್‌ ಕುಮಾರ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆರಿಸಲಿದ್ದಾರೆ.

ಬಿಹಾರದ ಎನ್‌ಡಿಎ ಕೂಟದ ಪ್ರಮುಖ ಪಕ್ಷಗಳಾದ ಜೆಡಿಯು, ಬಿಜೆಪಿ, ಎಚ್‌ಎಎಮ್‌, ವಿಕಾಸ್‌ಶೀಲ್‌ ಇನ್ಸಾನ್‌ ಪಕ್ಷ(ವಿಐಪಿ) ಪಕ್ಷದ ನಾಯಕರು ಶುಕ್ರವಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನಿವಾಸದಲ್ಲಿ ಸಭೆ ನಡೆಸಿ ನಿತೀಶ್‌ ಕುಮಾರ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಬಗ್ಗೆ ನಿರ್ಧರಿಸಲಾಯಿತು.

ಭಾನುವಾರ ಮಧ್ಯಾಹ್ನ 12.30ಕ್ಕೆ ಸಭೆ ಆರಂಭವಾಗಲಿದೆ ಎಂದು ನಿತೀಶ್‌ ಕುಮಾರ್‌ ಅವರು ಮಾಧ್ಯಮದವರಿಗೆ ತಿಳಿಸಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದಿದೆ. ಜೆಡಿಯುನಿಂದ 31 ಹೆಚ್ಚು ಸ್ಥಾನಗಳನ್ನು ಪಡೆದರೂ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು