ಮಂಗಳವಾರ, ಮಾರ್ಚ್ 28, 2023
26 °C

ತಮಿಳುನಾಡು ಬಿಜೆಪಿಯಿಂದ ಸುದ್ದಿ ವಾಹಿನಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳುನಾಡು ಬಿಜೆಪಿ ಘಟಕ ಸುದ್ದಿ ವಾಹಿನಿ ಆರಂಭಿಸಲು ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ವಾಹಿನಿಯ ಉಸ್ತುವಾರಿಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೆ ವಹಿಸಲಾಗುವುದು. ಇದಕ್ಕಾಗಿ ₹15 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಇದಕ್ಕಾಗಿ ಸಂಪನ್ಮೂಲ ಸಂಗ್ರಹ ಮಾಡಲಿವೆ ಎನ್ನಲಾಗಿದೆ. 

ಸದ್ಯ ಚಾನೆಲ್ ಆರಂಭದ ದಿನಾಂಕ ನಿರ್ಧಾರವಾಗಿಲ್ಲ. ಇದಕ್ಕೆ ಜನಂ ಟಿವಿ ಎಂದು ಹೆಸರಿಸಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೇರಳದಲ್ಲಿ ಬಿಜೆಪಿಯ ಮುಖವಾಣಿ ಎಂದು ಪರಿಗಣಿಸಲಾದ ‘ಜನಂ‘ ಟಿವಿಯ ವಿಸ್ತರಣೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು