ಮಂಗಳವಾರ, ಏಪ್ರಿಲ್ 20, 2021
32 °C
ಕಾಮನ್ ಕಾಸ್ ಸ್ವಯಂ ಸೇವಾಸಂಸ್ಥೆ ಅರ್ಜಿ ಸಲ್ಲಿಕೆ

ಸಿಬಿಐಗೆ ಕಾಯಂ ನಿರ್ದೇಶಕರನ್ನು ನೇಮಿಸುವಂತೆ ಕೋರಿ ಸುಪ್ರೀಂಗೆ ಪಿಐಎಲ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆ – ಸಿಬಿಐಗೆ ಕಾಯಂ ನಿರ್ದೇಶಕರನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ  ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಕಾಮನ್‌ ಕಾಸ್ ಎಂಬ ಸ್ವಯಂ ಸೇವಾ ಸಂಸ್ಥೆಯೊಂದು ಈ ಕುರಿತು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಈ ಹಿಂದೆ ಸಿಬಿಐ ನಿರ್ದೇಶಕರಾಗಿದ್ದ ರಿಷಿ ಕುಮಾರ್ ಶುಕ್ಲಾ ಅವರ ಅಧಿಕಾರಾವಧಿ ಫೆ.2ಕ್ಕೆ ಕೊನೆಗೊಂಡಿದೆ. ತೆರವಾದ ಸ್ಥಾನಕ್ಕೆ ಸರ್ಕಾರ ಕಾಯಂ ನಿರ್ದೇಶಕರನ್ನು ನೇಮಿಸಬೇಕಿತ್ತು. ಅದರ ಬದಲಿಗೆ ಪ್ರವೀಣ್ ಸಿನ್ಹಾ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿದೆ. ದೆಹಲಿ ಸ್ಪಷಲ್ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್‌ (ಡಿಎಸ್‌ಪಿಇ) ಕಾಯ್ದೆಯ ಸೆಕ್ಷನ್ 4ಎ ಪ್ರಕಾರ ಕಾಯಂ ನಿರ್ದೇಶಕರನ್ನು ನೇಮಿಸುವಲ್ಲಿ ಸರ್ಕಾರ ವಿಫಲವಾಗಿದೆ‘ ಎಂದು ಸಂಸ್ಥೆ ಅರ್ಜಿಯಲ್ಲಿ ಆರೋಪಿಸಿದೆ.

ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಲಾದ ಈ ಮನವಿಯಲ್ಲಿ, ಸಿಬಿಐ ನಿರ್ದೇಶಕರ ಆಯ್ಕೆಯ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು