ಭಾನುವಾರ, ಆಗಸ್ಟ್ 14, 2022
22 °C
ಗಾಳಿ ಗುಣಮಟ್ಟ ಕಳಪೆಯಾಗಿರುವ ನಗರ ಮತ್ತು ಪಟ್ಟಣಗಳು

ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಕ್ಕೆ ಎನ್‌ಜಿಟಿ ನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ಆಸುಪಾಸಿನ ನಗರಗಳು (ಎನ್‌ಸಿಆರ್‌) ಸೇರಿದಂತೆ ದೇಶದ ಯಾವ ನಗರ ಮತ್ತು ಪಟ್ಟಣಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆಯೋ, ಅಲ್ಲೆಲ್ಲ ಕೋವಿಡ್‌ 19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲ ವಿಧದ ಪಟಾಕಿ ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್‌ ನೇತೃತ್ವದ ಪೀಠ ನೀಡಿರುವ ಈ ನಿರ್ದೇಶನದಲ್ಲಿ ಗಾಳಿಯ ಗುಣಮಟ್ಟ ಮಧ್ಯಮಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಹಸಿರು ಪಟಾಕಿಗಳನ್ನು ಹೊಡೆಯುವಂತಿಲ್ಲ ಎಂಬ ನಿಬಂಧನೆಯನ್ನು ಉಲ್ಲೇಖಿಸಿದೆ.

ಗಾಳಿಯ ಗುಣಮಟ್ಟ ಮಧ್ಯಮ ಹಂತದಲ್ಲಿರುವ ನಗರ/ಪಟ್ಟಣದಂತಹ ಪ್ರದೇಶಗಳಲ್ಲಿ ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ 11.55 ರಿಂದ 12.30ರವರೆಗೆ ಹಸಿರು ಪಟಾಕಿಗಳನ್ನು ಹೊಡೆಯಬಹುದೆಂದು ಎನ್‌ಜಿಟಿ ತಿಳಿಸಿದೆ.

ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿರುವ ಪೀಠ, ನಿಷೇಧಿತ ಪಟಾಕಿಗಳ ಮಾರಾಟವಾಗುತ್ತಿದ್ದರೆ ಅವುಗಳನ್ನು ವಶಪಡಿಸಿಕೊಳ್ಳಬೇಕು. ಕಾನೂನು ಉಲ್ಲಂಘಿಸಿದವರಿಗೆ ದಂಡ ಹಾಕಬೇಕು‘ಎಂದು ಹೇಳಿದೆ.  ಮಾಲಿನ್ಯದ ತೊಂದರೆಗೊಳಾದವರು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪೀಠ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು