ಪಟಾಕಿ ನಿಷೇಧಿಸಿ ಎನ್‌ಜಿಟಿ ಆದೇಶ, ಅಧಿಕ ಮಾಲಿನ್ಯ ದಾಖಲಾದ ನಗರಗಳಿಗೂ ಅನ್ವಯ

ನವದೆಹಲಿ: ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ನವೆಂಬರ್ 9ರಿಂದ 30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶ ನೀಡಿದೆ.
ಪಟಾಕಿ ನಿಷೇಧ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಪೂರ್ಣಗೊಳಿಸಿ ನವೆಂಬರ್ 5ರಂದು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ ಸೋಮವಾರ ಆದೇಶ ಪ್ರಕಟಿಸಿದೆ.
The cities/towns where air quality is ‘moderate’ or below, only green crackers be sold and the timings for use and bursting of crackers be restricted to two hours during festivals, like Diwali, Chhath, New Year/Christmas Eve as may be specified by the State, says NGT https://t.co/s7CuhSCuRn
— ANI (@ANI) November 9, 2020
ಕಳೆದ ವರ್ಷದ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಪ್ರಮಾಣದಲ್ಲಿ ಹಾಗೂ ವಾಯು ಮಾಲಿನ್ಯವು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಗಾಳಿಯ ಗುಣಮಟ್ಟವು ‘ಮಧ್ಯಮ’ ಅಥವಾ ‘ಸಾಮಾನ್ಯ’ವಾಗಿ ಇರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು, ಬಳಸಲು ಅವಕಾಶ ನೀಡಬಹುದು. ಅಲ್ಲೆಲ್ಲ ದೀಪಾವಳಿ, ಕ್ರಿಸ್‌ಮಸ್, ಹೊಸ ವರ್ಷಾಚರಣೆ ಸಂದರ್ಭ ಎರಡು ಗಂಟೆಗಳ ಕಾಲ ಪಟಾಕಿ ಸುಡುವುದಕ್ಕೆ ಅವಕಾಶ ನೀಡಿ ಸಂಬಂಧಿಸಿದ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಬಹುದು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ಕೋವಿಡ್–19 ನಿಯಂತ್ರಿಸುವ ನಿಟ್ಟಿನಲ್ಲಿ ವಾಯುಮಾಲಿನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು ಎಂದೂ ಆದೇಶದಲ್ಲಿ ಹೇಳಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.