ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಸರ್ಕಾರಕ್ಕೆ ₹3 ಸಾವಿರ ಕೋಟಿ ದಂಡ ವಿಧಿಸಿದ ಎನ್‌ಜಿಟಿ

Last Updated 16 ಸೆಪ್ಟೆಂಬರ್ 2022, 16:32 IST
ಅಕ್ಷರ ಗಾತ್ರ

ನವದೆಹಲಿ: ಘನ ತ್ಯಾಜ್ಯ ಮತ್ತು ಕೊಳಚೆ ನೀರು ಅಸಮರ್ಪಕ ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ರಾಜಸ್ಥಾನ ಸರ್ಕಾರಕ್ಕೆ ಪರಿಸರ ಪರಿಹಾರವಾಗಿ ₹3,000 ಕೋಟಿ ಪಾವತಿಸಲು ನಿರ್ದೇಶಿಸಿದೆ.

ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ಅವರ ನೇತೃತ್ವದ ಎನ್‌ಜಿಟಿಯ ಪ್ರಧಾನ ಪೀಠವು,ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾಗಿರುವುದಕ್ಕೆ ಮತ್ತು ಮಾಲಿನ್ಯಕ್ಕೆ ಕಾರಣವಾಗಿರುವುದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಯಾಗಿಸಿ, ದಂಡದ ಮೊತ್ತವನ್ನುಎರಡು ತಿಂಗಳೊಳಗೆ ಪ್ರತ್ಯೇಕ ಖಾತೆಯಲ್ಲಿ ಠೇವಣಿ ಇರಿಸುವಂತೆ, ಈ ಹಣವನ್ನು ಪರಿಸರ ಪುನಶ್ಚೇತನಕ್ಕೆ ಬಳಸಿಕೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಸುಧೀರ್‌ ಅಗರ್‌ವಾಲ್‌ ಮತ್ತು ತಜ್ಞ ಸದಸ್ಯ ಎ.ಸೆಂಥಿಲ್‌ ವೆಲ್‌ ಅವರೂ ಇರುವಹಸಿರು ಪೀಠವು, ತ್ಯಾಜ್ಯ ನಿರ್ವಹಣೆ ಮತ್ತು ಜಾರಿಯಲ್ಲಿರುವ ತ್ಯಾಜ್ಯ ನಿರ್ವಹಣಾ ನಿಯಮಗಳ ಅನುಸರಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT