ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ಗೆ ₹2,000 ಕೋಟಿ ದಂಡ ವಿಧಿಸಿದ ಎನ್‌ಜಿಟಿ

Last Updated 23 ಸೆಪ್ಟೆಂಬರ್ 2022, 15:40 IST
ಅಕ್ಷರ ಗಾತ್ರ

ನವದೆಹಲಿ: ಘನ ಮತ್ತು ದ್ರವ ತ್ಯಾಜ್ಯವನ್ನು ಸಂಸ್ಕರಿಸುವಲ್ಲಿ ವಿಫಲವಾದ ಕಾರಣಕ್ಕೆ ಪಂಜಾಬ್ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ₹2,000 ಕೋಟಿ ರೂಪಾಯಿ ದಂಡ ವಿಧಿಸಿದೆ.

ಘನ ಮತ್ತು ದ್ರವ ತಾಜ್ಯಗಳ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಭಾರಿ ಅಂತರವಾಗಿದ್ದರಿಂದ ಈ ದಂಡ ಹಾಕಲಾಗಿದೆ.

ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ. ಗೋಯಲ್ ನೇತೃತ್ವದ ಪೀಠವು, ‘ಮಾಲಿನ್ಯವನ್ನು ನಿಯಂತ್ರಿಸಲು ಸಮಗ್ರ ಯೋಜನೆಯನ್ನು ರೂಪಿಸುವುದುರಾಜ್ಯದ ಜವಾಬ್ದಾರಿ. ಆದರೆ ಪಂಜಾಬ್‌ ಇದನ್ನು ಅರ್ಥಮಾಡಿಕೊಂಡಿಲ್ಲ. ಆಯವ್ಯಯ ಹಂಚಿಕೆಯಲ್ಲಿ ಕೊರತೆಯಿದ್ದರೆ, ವೆಚ್ಚವನ್ನು ಕಡಿಮೆ ಮಾಡುವ ಅಥವಾ ಸಂಪನ್ಮೂಲಗಳನ್ನು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರವು ಸೂಕ್ತ ಯೋಜನೆ ಹೊಂದಬಹುದು’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT