ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಉಲ್ಲಂಘಿಸಿದ ಸಕ್ಕರೆ ಕಾರ್ಖಾನೆಗಳಿಗೆ ₹ 20 ಕೋಟಿ ದಂಡ ವಿಧಿಸಿದ ಎನ್‌ಜಿಟಿ

ಉತ್ತರಪ್ರದೇಶದ ಧಾಮ್‌ಪುರ್ ಸಕ್ಕರೆ ಕಾರ್ಖಾನೆಯ 4 ಘಟಕಗಳಿಗೆ ದಂಡ
Last Updated 6 ಸೆಪ್ಟೆಂಬರ್ 2021, 12:41 IST
ಅಕ್ಷರ ಗಾತ್ರ

ನವದೆಹಲಿ: ಪರಿಸರ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿದ ಕಾರಣಕ್ಕಾಗಿ ಉತ್ತರಪ್ರದೇಶದ ಧಾಮ್‌ಪುರ್ ಸಕ್ಕರೆ ಕಾರ್ಖಾನೆಯ ನಾಲ್ಕು ಘಟಕಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ₹ 20 ಕೋಟಿ ದಂಡ ವಿಧಿಸಿದೆ.

‘ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಹಾಗೂ ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗಳು (ಯುಪಿಪಿಸಿಬಿ) ಸಲ್ಲಿಸಿರುವ ವಿವಿಧ ತಪಾಸಣಾ ವರದಿಗಳನ್ನು ಪರಿಶೀಲಿಸಲಾಗಿದ್ದು, ಇದರಲ್ಲಿ ಗಣನೀಯ ಪ್ರಮಾಣದಲ್ಲಿ ನಿರಂತರವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ’ ಎಂದು ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ಅವರ ನೇತೃತ್ವದ ಪೀಠವು ತಿಳಿಸಿದೆ.

ಸಕ್ಕರೆ ಕಾರ್ಖಾನೆಯ ನಾಲ್ಕು ಘಟಕಗಳಿಗೆ ತಲಾ ₹ 5 ಕೋಟಿ ದಂಡ ವಿಧಿಸಿರುವ ಎನ್‌ಜಿಟಿ, ದಂಡದ ಮೊತ್ತವನ್ನು 30 ದಿನಗಳ ಒಳಗಾಗಿ ಪಾವತಿಸಬೇಕು ಎಂದೂ ಕಾಲಮಿತಿಯನ್ನು ನಿಗದಿಗೊಳಿಸಿದೆ.

‘ಈ ನಾಲ್ಕು ಘಟಕಗಳು ನಿರಂತರವಾಗಿ ಪರಿಸರ ಕಾನೂನುಗಳನ್ನು ಉಲ್ಲಂಘಿಸುತ್ತಿವೆ. ಪರಿಸರ ಮಾಲಿನ್ಯದ ಹಾನಿಕಾರಕ ಪರಿಣಾಮದ ಕುರಿತು ಉದಾಸೀನ ಭಾವ ಸಲ್ಲದು. ಈ ಘಟಕಗಳು ಸ್ಥಳೀಯ ನಿವಾಸಿಗಳು ಮಾಲಿನ್ಯಮುಕ್ತ ವಾತಾವರಣದಲ್ಲಿ ಬದುಕುವ ಹಕ್ಕನ್ನು ಕಸಿದುಕೊಂಡಿವೆ’ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT