ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಅಗ್ನಿ ದುರಂತ ಸ್ಥಳಕ್ಕೆ ಎನ್‌ಎಚ್‌ಆರ್‌ಸಿ ತಂಡ ಭೇಟಿ

Last Updated 16 ಮೇ 2022, 14:19 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ತಂಡವು ದೆಹಲಿಯ ಮುಂಡ್ಕಾ ಕಟ್ಟಡದಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ತನಿಖೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಟ್ಟಡದಲ್ಲಿ ಮೇ 13 ರಂದು ಸಂಭವಿಸಿದ ಅಗ್ನಿ ದುರಂತದಲ್ಲಿ 27 ಜನರು ಮೃತಪಟ್ಟಿದ್ದರು.

ಡಿಐಜಿ ಸುನೀಲ್ ಕುಮಾರ್ ಮೀನಾ ನೇತೃತ್ವದಲ್ಲಿ ಡಿಎಸ್ಪಿ ಎಂ.ಎಸ್‌.ಗಿಲ್‌, ಡಿಎಸ್ಪಿ ಕುಲಬೀರ್‌ ಸಿಂಗ್‌, ಇನ್‌ಸ್ಪೆಕ್ಟರ್‌ಗಳಾದ ಕುಲ್ವಂತ್‌ ಸಿಂಗ್‌ ಮತ್ತು ಅಉರಣ್‌ ತ್ಯಾಗಿ ಅವರನ್ನೊಳಗೊಂಡ ತಂಡವು ನಾಲ್ವರು ಸದಸ್ಯರನ್ನು ಒಳಗೊಂಡ ತಂಡವು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಎಚ್‌ಆರ್‌ಸಿ ಭಾನುವಾರ ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ. ಹಿಂದೆ ಇದೇ ರೀತಿಯ ಘಟನೆಗಳು ನಡೆದಿದ್ದು, ಅಧಿಕಾರಿಗಳು ಅವುಗಳಿಂದ ಪಾಠ ಕಲಿತಿಲ್ಲ ಎಂದು ಆಯೋಗ ಹೇಳಿದೆ. ಎರಡು ವಾರಗಳಲ್ಲಿ ವರದಿ ನೀಡುವಂತೆ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಎನ್‌ಎಚ್‌ಆರ್‌ಸಿ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT