ಮಂಗಳವಾರ, ಜನವರಿ 25, 2022
24 °C

ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಮಾನವಹಕ್ಕುಗಳ ಆಯೋಗದಿಂದ ಕೇಂದ್ರಕ್ಕೆ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕರ ಹತ್ಯೆ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಗೆ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯದರ್ಶಿ, ಕೇಂದ್ರ ಗೃಹ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ, ನಾಗಾಲ್ಯಾಂಡ್‌ನ ಡಿಜಿಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ವಿಸ್ತೃತ ವರದಿಯನ್ನು 6 ವಾರಗಳ ಒಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ನಾಗರಿಕರ ಹತ್ಯೆಯು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದ್ದಲ್ಲದೆ, ಅಸ್ಸಾಂ ರೈಫಲ್ಸ್ ಕ್ಯಾಂಪ್ ಮೇಲೆ ದಾಳಿಗೂ ಕಾರಣವಾಗಿದೆ. ಪರಿಣಾಮವಾಗಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಆಯೋಗ ಹೇಳಿದೆ.

ಓದಿ: 

ಉಗ್ರ ನಿಗ್ರಹ ಕಾರ್ಯಾಚರಣೆಯೇ ಆಗಿದ್ದರೂ ಮಾನವೀಯ ಧೋರಣೆಯೊಂದಿಗೆ ಸರಿಯಾದ ಮುನ್ನೆಚ್ಚರಿಕೆ ವಹಿಸಬೇಕಾದದ್ದು ಭದ್ರತಾ ಪಡೆಗಳ ಜವಾಬ್ದಾರಿ ಎಂದೂ ಆಯೋಗ ಹೇಳಿದೆ. 

ನಾಗರಿಕರ ಹತ್ಯೆಗೆ ಸಂಬಂಧಿಸಿ ಮಾಧ್ಯಮ ವರದಿಗಳ ಆಧಾರದಲ್ಲಿ ಮಾನವ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿತ್ತು.

ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್‌ ಗ್ರಾಮಗಳಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಶನಿವಾರ ರಾತ್ರಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದರು. ಘಟನೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ವಿಶೇಷ ತನಿಖಾ ತಂಡವು ತನಿಖೆ ನಡೆಸುತ್ತಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು