ಶನಿವಾರ, ಅಕ್ಟೋಬರ್ 31, 2020
18 °C

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ : ಸ್ಟ್ಯಾನ್‌ ಸ್ವಾಮಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭೀಮಾ ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್‌ ಸ್ಟ್ಯಾನ್‌ ಸ್ವಾಮಿ(82) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಲಾಗಿದ್ದು, ಅವರನ್ನು  ಮುಂಬೈಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಬಾರಿ ಸ್ವಾಮಿ ಅವರನ್ನು ಪ್ರಶ್ನಿಸಿರುವ ಪುಣೆ ಪೊಲೀಸ್ ಮತ್ತು ಎನ್‌ಐಎ ತಂಡದರು, ಗುರುವಾರ ಅವರನ್ನು ರಾಂಚಿ ಮನೆಯಲ್ಲಿ ಬಂಧಿಸಿದ್ದಾರೆ. ನಿಷೇಧಿತ ಸಿಪಿಐ(ಮಾವೊವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಾಮಿ ಸೇರಿದಂತೆ ಈ ಪ್ರಕರಣದಲ್ಲಿ ಹದಿನಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ ಮತ್ತು ಭಯೋತ್ಪಾದಕಾ ನಿಗ್ರಹ ಕಾಯ್ದೆ – ಯುಪಿಎಪಿ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು