ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ದಾವೂದ್, ಛೋಟಾ ಶಕೀಲ್ ಪರ ಕೆಲಸ ಮಾಡುತ್ತಿದ್ದವರಿಬ್ಬರ ಬಂಧನ

Last Updated 13 ಮೇ 2022, 4:16 IST
ಅಕ್ಷರ ಗಾತ್ರ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಆಪ್ತ ಛೋಟಾ ಶಕೀಲ್ ಪರ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮುಂಬೈಯಲ್ಲಿ ಬಂಧಿಸಿದೆ.

ಬಂಧಿತರನ್ನು ಆರಿಫ್ ಅಬೂಬಕರ್ ಶೇಖ್ (59) ಹಾಗೂ ಶಬ್ಬೀರ್ ಅಬೂಬಕರ್ ಶೇಖ್ (51) ಎಂದು ಗುರುತಿಸಲಾಗಿದೆ.

ಬಂಧಿತರನ್ನು ಇಂದು (ಶುಕ್ರವಾರ) ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ದಳ ತಿಳಿಸಿದೆ.

ಇಬ್ಬರೂ ಮುಂಬೈಯ ಪಶ್ಚಿಮ ಉಪನಗರ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ದಾವೂದ್ ಸಹಚರರ ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದರು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈಯ ಅನೇಕ ಕಡೆಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರ ಮತ್ತು ಹವಾಲಾ ದಂದೆ ನಡೆಸುವವರ ಮೇಲೆ ಕೆಲ ದಿನಗಳ ಹಿಂದಷ್ಟೇ ಎನ್‌ಐಎ ದಾಳಿ ನಡೆಸಿತ್ತು. ನಾಗಪದ, ಗೋರ್‌ಗಾಂವ್, ಬೊರಿವಲಿ, ಸಂತಾಕ್ರೂಜ್, ಮುಂಬ್ರಾ, ಭೆಂದಿ ಬಜಾರ್ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸಲಾಗಿತ್ತು. ಫೆಬ್ರುವರಿಯಲ್ಲಿ ದಾಖಲಿಸಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ದಾಳಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT