ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಜೆಇಐ ಸದಸ್ಯರ ಮನೆ ಮೇಲೆ ಎನ್‌ಐಎ ದಾಳಿ

Last Updated 8 ಆಗಸ್ಟ್ 2021, 9:50 IST
ಅಕ್ಷರ ಗಾತ್ರ

ಶ್ರೀನಗರ: ‘ಜಮ್ಮು– ಕಾಶ್ಮೀರದಲ್ಲಿ ಜಮಾತ್‌–ಎ–ಇಸ್ಲಾಮಿ ಸಂಘಟನೆಯ(ಜೆಇಐ) ಸದಸ್ಯರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಭಾನುವಾರ ದಾಳಿ ನಡೆಸಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಜಮ್ಮು ಮತ್ತು ಕಾಶ್ಮೀರದ ರಾಮ್‌ಬನ್, ಕಿಶ್ತವಾರ್‌ ಮತ್ತು ರಜೌರಿ ಸೇರಿದಂತೆ ಹಲವೆಡೆ ಜೆಇಐ ಸದಸ್ಯರಿಗೆ ಸಂಬಂಧಿಸಿದ ಮನೆಗಳು, ಕಚೇರಿಗಳು ಸೇರಿ 45ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳವು ಶೋಧ ನಡೆಸಿದೆ’ ಎಂದು ಅವರು ಮಾಹಿತಿ ನೀಡಿದರು.

‘ಪೊಲೀಸರು ಮತ್ತು ಸಿಆರ್‌ಪಿಎಫ್‌ ನೆರವಿನಿಂದ ಎನ್ಐಎ ಈ ದಾಳಿ ನಡೆಸಿದೆ. ಈ ಸಂಘಟನೆಯ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ದಾಳಿ ನಡೆದಿದೆ. ಅನೇಕ ಸ್ಥಳಗಳಲ್ಲಿ ಈಗಲೂ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.

‌ಫೆಬ್ರುವರಿ 2019ರಲ್ಲಿ ಕೇಂದ್ರ ಸರ್ಕಾರವು ಭಯೋತ್ಪಾದನೆ ತಡೆ ಕಾಯ್ದೆಯಡಿ ಜಮಾತ್‌–ಎ–ಇಸ್ಲಾಮಿ ಸಂಘಟನೆಯ ಮೇಲೆ ಐದು ವರ್ಷಗಳ ನಿಷೇಧ ಹೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT