ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್ಪುರ ಸಂಚು ಪ್ರಕರಣ: 8 ಮಂದಿ ಐಸಿಸ್ ಉಗ್ರರು ದೋಷಿಗಳು, ಎನ್‌ಐಎ ಕೋರ್ಟ್ ತೀರ್ಪು

Last Updated 25 ಫೆಬ್ರವರಿ 2023, 11:26 IST
ಅಕ್ಷರ ಗಾತ್ರ

ಲಖನೌ: ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಎಂಟು ಮಂದಿ ಐಸಿಸ್‌ ಉಗ್ರರನ್ನು ದೋಷಿಗಳೆಂದು ಎನ್‌ಐಎ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಫೆಬ್ರುವರಿ 27ರಂದು ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

2017ರ ಕಾನ್ಪುರ ಸಂಚು ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ, ಯುಎ (ಪಿ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು.

2017ರ ಮಾರ್ಚ್ 7ರಂದು ರೈಲಿನಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 10 ಜನರು ತೀವ್ರವಾಗಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಲಖನೌದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಉತ್ತರ ಪ್ರದೇಶದ ವಿವಿದೆಢೆ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪರೀಕ್ಷಿಸಿ, ಸ್ಫೋಟಿಸಲು ಆರೋಪಿಗಳು ಸಂಚು ರೂಪಿಸಿದ್ದರು ಎಂಬುದು ಎನ್‌ಐಎ ತನಿಖೆಯಿಂದ ತಿಳಿದುಬಂದಿತ್ತು.

ಆರೋಪಿಗಳ ಬಳಿ ಸ್ಫೋಟಕ ಸ್ಥಳಗಳ ಮಾಹಿತಿಯನ್ನೊಳಗೊಂಡ ಪುಸ್ತಕವೊಂದು ಸಿಕ್ಕಿದ್ದು, ಇದು ತನಿಖೆಗೆ ನೆರವಾಯಿತು ಎಂದು ಎನ್‌ಐಎ ತಿಳಿಸಿದೆ.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT