ಮಂಗಳವಾರ, ಏಪ್ರಿಲ್ 20, 2021
24 °C

ವಾಜೆ ಬಂಧನ ಅವಧಿ: ಏ.7ರವರೆಗೆ ವಿಸ್ತರಣೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಂಧಿತ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರನ್ನು ಎನ್‌ಐಎ ವಶಕ್ಕೆ ಒಪ್ಪಿಸಿದ್ದ ಅವಧಿಯನ್ನು ವಿಶೇಷ ಎನ್‌ಐಎ ಕೋರ್ಟ್‌ ಏಪ್ರಿಲ್‌ 7ರವರೆಗೂ ವಿಸ್ತರಿಸಿದೆ. ಆರು ದಿನಗಳು ವಾಜೆ ಅವರನ್ನು ತನ್ನ ವಶಕ್ಕೆ ಒಪ್ಪಿಸಬೇಕು ಎಂದು ತನಿಖಾ ಸಂಸ್ಥೆಯು ಕೋರ್ಟ್‌ಗೆ ಕೇಳಿತ್ತು.

ಉದ್ಯಮಿ ಮುಖೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಹಾಗೂ ಉದ್ಯಮಿ ಮನ್‌ಸುಖ್‌ ಹಿರೇನ್‌ ಶಂಕಾಸ್ಪದ ಸಾವಿನ ಪ್ರಕರಣದ ಸಂಬಂಧ ವಾಜೆ ಅವರನ್ನು ಎನ್‌ಐಎ ಬಂಧಿಸಿದೆ. ಈ ಮೊದಲು ಅವರನ್ನು ಮಾರ್ಚ್‌ 13ರಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು