ನವದೆಹಲಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ದೆಹಲಿ ಕೋರ್ಟ್‌ಗೆ ಕೋರಿದೆ.

ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಫ್‌ಎಫ್) ಮುಖಂಡ ಯಾಸಿನ್ ಮಲಿಕ್, 2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಅಸ್ಥಿರತೆ ಸೃಷ್ಟಿಸಲು ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿರುವ ಆರೋಪಗಳು ಸಾಬೀತಾಗಿವೆ. ಕಳೆದ ವಾರ ದೆಹಲಿ ವಿಶೇಷ ನ್ಯಾಯಾಲಯವು ಯಾಸಿನ್ ಅಪರಾಧಿ ಎಂದು ತೀರ್ಪು ನೀಡಿದೆ.

ಯಾಸಿನ್‌ಗೆ ಮರಣದಂಡನೆ ವಿಧಿಸುವಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರಿಗೆ ಎನ್‌ಐಎ ಸಲ್ಲಿಸಿದೆ. ಯಾಸಿನ್‌ಗೆ ನ್ಯಾಯಾಲಯದ ಸಲಹೆಗಾರರಾಗಿ ಕೋರ್ಟ್ ನೇಮಕ ಮಾಡಿರುವ ಸಲಹೆಗಾರರು ಜೀವಾವಧಿ ಶಿಕ್ಷೆ ವಿಧಿಸುವಂತೆ ಕೋರಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದು ಪ್ರಕಟಿಸಲಿದೆ.

ತೀರ್ಪಿನ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಅಂಗಡಿಗಳು, ವ್ಯಾಪಾರ ವಹಿವಾಟು ಸ್ಥಗಿತಗೊಂಡಿವೆ. ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆಯಾಗದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ–'ಸ್ವತಂತ್ರ ದನಿಯಾಗುವುದು ಮುಖ್ಯ': ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಸೆಕ್ಷನ್ 16 (ಭಯೋತ್ಪಾದನೆ), 17 (ಭಯೋತ್ಪಾದನೆಗೆ ದೇಣಿಗೆ ಸಂಗ್ರಹ), 18 (ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದಕ ಸಂಘಟನೆ ಸದಸ್ಯ) ಸೆಕ್ಷನ್ 120–ಬಿ (ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124–ಎ (ದೇಶದ್ರೋಹ) ಪ್ರಕರಣಗಳು ಯಾಸಿನ್ ಮೇಲಿದ್ದವು. ಅವುಗಳನ್ನು ಯಾಸಿನ್ ನಿರಾಕರಿಸಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.