ಶುಕ್ರವಾರ, ಮೇ 27, 2022
29 °C
ಭಯೋತ್ಪಾದನಾ ಕೃತ್ಯಕ್ಕೆ ಸಂಚು

ಭಯೋತ್ಪಾದನಾ ಸಂಚು:: 25 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದ ಇತರ ಭಾಗಗಳಲ್ಲಿ ಭೌತಿಕ ಹಾಗೂ ಸೈಬರ್‌ ಚಟುವಟಿಕೆ ಮೂಲಕ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ಸೇರಿ 25 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ.

‘ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್‌-ಎ-ತಯಬಾ(ಎಲ್‌ಇಟಿ), ಜೈಶೆ ಮೊಹಮ್ಮದ್ (ಜೆಎಂ), ಹಿಜ್ಬುಲ್‌–ಮುಜಾಹಿದೀನ್ (ಎಚ್‌ಎಂ), ಅಲ್-ಬದ್ರ್ ಹಾಗೂ ಇತರೆ ಸಂಯೋಜಿತ ಸಂಘಟನೆಗಳಾದ ಟಿಆರ್‌ಎಫ್‌ ಹಾಗೂ ಪಿಎಎಫ್‌ಎಫ್‌ನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಎನ್ಐಎ ವಕ್ತಾರರು ತಿಳಿಸಿದರು.

’ಇಲ್ಲಿನ ಮೂಲನಿವಾಸಿಗಳ ಪ್ರತಿರೋಧ ಗುಂಪುಗಳ ಹೆಸರಿನಲ್ಲಿ ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆಗಳು ಒಟ್ಟಾಗಿ ಸೇರಿ ಕಾರ್ಯಾಚರಣೆ ವಿಧಾನದಲ್ಲಿ ಬದಲಾವಣೆ ಮಾಡಿಕೊಂಡು ಭಯೋತ್ಪಾದನಾ ಕೃತ್ಯಗಳನ್ನು ನಡೆಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪಾತ್ರವನ್ನು ಅಲ್ಲಗಳೆಯುವ ಪಿತೂರಿ ನಡೆಸಿದ್ದರು ಎಂಬುದು ತನಿಖೆ ವೇಳೆ ಕಂಡು ಬಂದಿದೆ’ ಎಂದು ಅವರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.