ನವದೆಹಲಿ: ಐಎಸ್ ಸಂಘಟನೆ ಜೊತೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಮತ್ತು ರಾಷ್ಟ್ರಧ್ವಜ ಸುಟ್ಟ ಪ್ರಕರಣ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಕರ್ನಾಟಕದ ಶಿವಮೊಗ್ಗದ ಮಾಝ್ ಮುನೀರ್ ಅಹಮದ್(23) ಮತ್ತು ಸಯ್ಯದ್ ಯಾಸಿನ್ (22) ಎಂಬುವವರ ವಿರುದ್ಧ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗಲಭೆ ಸೃಷ್ಟಿಸಲು ಮತ್ತು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಇವರು ಸಂಚು ರೂಪಿಸಿದ್ದರು. ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇತರ ಆರು ಮಂದಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದೂ ಹೇಳಿದ್ದಾರೆ.
ಕರ್ನಾಟಕ ಪೊಲೀಸರು ದಾಖಲಿಸಿಕೊಂಡಿದ್ದ ಈ ಪ್ರಕರಣದ ವಿಚಾರಣೆಯನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎನ್‌ಐಎ ಕೈಗೆತ್ತಿಕೊಂಡಿತ್ತು.
‘ಬಿ.ಟೆಕ್ ಪದವೀಧರರಾಗಿರುವ ಅಹಮದ್ ಮತ್ತು ಯಾಸಿನ್, ಬೆಂಕಿ ಹಚ್ಚಿರುವ ಪ್ರಕರಣಗಳು ಸೇರಿದಂತೆ 25ಕ್ಕೂ ಹೆಚ್ಚು ವಿಧ್ವಂಸಕ ಕೃತ್ಯಗಳಲ್ಲಿ ಶಾಮೀಲಾಗಿದ್ದಾರೆ’ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.
ಶಿವಮೊಗ್ಗದ ವರಾಹಿ ನದಿ ದಂಡೆಯಲ್ಲಿ ಯಾಸಿನ್ ಬಾಂಬ್ ಸ್ಫೋಟದ ಪ್ರಯೋಗ ನಡೆಸಿದ್ದ ಎಂದೂ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.