ಮಂಗಳವಾರ, ಡಿಸೆಂಬರ್ 7, 2021
19 °C

ಕಾಶ್ಮೀರದಲ್ಲಿ ನಾಗರಿಕರ ಹತ್ಯೆ: ತನಿಖೆ ಹೊಣೆ ಎನ್‌ಐಎಗೆ ವಹಿಸುವ ಸಾಧ್ಯತೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದಿರುವ ನಾಗರಿಕರ ಹತ್ಯೆಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದನೆಯ ಆಯಾಮವನ್ನು ಮುಂದಿಟ್ಟುಕೊಂಡು ತನಿಖೆ ನಡೆಯುವ ನಿರೀಕ್ಷೆ ಇದೆ.

ಓದಿ: 

ಸೋಮವಾರ ನಡೆದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ ಸಮಾವೇಶದಲ್ಲಿಯೂ ಕಾಶ್ಮೀರ ವಿಚಾರ ಚರ್ಚೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.

ನಾಗರಿಕರ ಹತ್ಯೆಯಿಂದಾಗಿ ವಲಸಿಗರು ಕಾಶ್ಮೀರ ತೊರೆಯುತ್ತಿರುವುದಲ್ಲದೆ ಸ್ಥಳೀಯರೂ ಭೀತಿಗೆ ಒಳಗಾಗುವಂತಾಗಿದೆ. ಸರ್ಕಾರವು ಕೈಗೊಂಡ ಕ್ರಮಗಳಿಂದ ಕಾಶ್ಮೀರಕ್ಕೆ ಮರಳಲು ಬಯಸಿರುವ ಕಾಶ್ಮೀರಿ ಪಂಡಿತ ಸಮುದಾಯದವರಲ್ಲಿಯೂ ಆತಂಕಕ್ಕೆ ಕಾರಣವಾಗಿದೆ ಎಂದೂ ಮೂಲಗಳು ಹೇಳಿವೆ.

ಎನ್ಐಎಯ ಸ್ಥಳೀಯ ತಂಡವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ತನಿಖೆಗೆ ನೆರವಾಗುತ್ತಿದೆ. ಹತ್ಯೆಯ ಹಿಂದಿರುವ ಸಂಚುಕೋರರ ಬಗ್ಗೆ ಮಾಹಿತಿ ಕಲೆಹಾಕಲು ಯತ್ನಿಸುತ್ತಿದೆ ಎನ್ನಲಾಗಿದೆ.

ಓದಿ: ಸಾವು ಹಿಂಬಾಲಿಸುತ್ತಿರುವಂತಿದೆ: ಕಾಶ್ಮೀರದ ವಲಸೆ ಕಾರ್ಮಿಕರ ಆತಂಕ 

ಕಳೆದ 16 ದಿನಗಳಲ್ಲಿ ಇತರ ರಾಜ್ಯಗಳಿಂದ ಬಂದ 11 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು