ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದಲ್ಲಿ ಶಂಕಿತ ಇಸ್ಲಾಮಿಕ್ ಸ್ಟೇಟ್ ಸದಸ್ಯನ ಮನೆ ಮೇಲೆ ಎನ್‌ಐಎ ದಾಳಿ

Last Updated 13 ಮಾರ್ಚ್ 2023, 14:13 IST
ಅಕ್ಷರ ಗಾತ್ರ

ನವದೆಹಲಿ: ಇಸ್ಲಾಮಿಕ್‌ ಸ್ಟೇಟ್‌ ಉಗ್ರಗಾಮಿ ಸಂಘಟನೆ ಜತೆ ಕೇರಳದ ಕೆಲವು ವ್ಯಕ್ತಿಗಳಿಗೆ ನಂಟು ಹೊಂದಿರುವುದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಶ್ರೀನಗರದಲ್ಲಿ ಶಂಕಿತ ಉಗ್ರ ಸಂಘಟನೆಯ ಸದಸ್ಯನ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಂಕಿತ ಉಜೈರ್ ಅಜರ್ ಭಟ್ ಮನೆಯಲ್ಲಿ ಶೋಧ ನಡೆಸಿರುವ ಎನ್‌ಐಎ, ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿದೆ.

ಮನೆಯಿಂದ ವಶಪಡಿಸಿದ ಡಿಜಿಟಲ್ ಉಪಕರಣಗಳ ಪರಿಶೀಲನೆ ಮುಂದುವರಿದಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

2021ರಲ್ಲಿ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಚಾನೆಲ್ ನಿರ್ವಹಿಸುತ್ತಿದ್ದ ಕೇರಳದ ಕಡನ್ನಮನ್ನದ ಮೊಹಮ್ಮದ್ ಅಮೀನ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಎಎನ್‌ಐ ಪ್ರಾರಂಭಿಸಿತು.

ಐಸಿಸ್ ಸಿದ್ಧಾಂತದ ಪ್ರಚಾರ ನಡೆಸುವುದು, ಜನರನ್ನು ಭಯೋತ್ಪಾದಕ ಗುಂಪಿಗೆ ಸೇರಿಸುವುದು ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT