ಮಂಗಳವಾರ, ಮೇ 24, 2022
28 °C

ಮುಂಬೈ: ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವೆಡೆ ಎನ್‌ಐಎ ದಾಳಿ, ಶೋಧ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹತ್ತಾರು ಕಡೆಗಳಲ್ಲಿ ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದ್ದು, ಶೋಧ ಕಾರ್ಯ ಪ್ರಗತಿಯಲ್ಲಿದೆ.

ಮುಂಬೈಯ ಹತ್ತಾರು ಪ್ರದೇಶಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರು ಮತ್ತು ಹವಾಲಾ ದಂದೆ ನಡೆಸುವವರ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ನಾಗಪದ, ಗೋರ್‌ಗಾಂವ್, ಬೊರಿವಲಿ, ಸಂತಾಕ್ರೂಜ್, ಮುಂಬ್ರಾ, ಭೆಂದಿ ಬಜಾರ್ ಹಾಗೂ ಇತರೆಡೆಗಳಲ್ಲಿ ದಾಳಿ ನಡೆದಿದೆ.

ಫೆಬ್ರುವರಿಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು