ಶ್ರೀನಗರ: ಹಲವು ಉಗ್ರಗಾಮಿ ಸಂಘಟನೆಗಳ ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.
ದಾಳಿ ವೇಳೆ ನಡೆಯಬಹುದಾದ ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಅರೆಸೈನಿಕ ಪಡೆಗಳು ಎನ್ಐಎಗೆ ನೆರವು, ಭದ್ರತೆ ಒದಗಿಸಿವೆ.
‘ಉಗ್ರ ಸಂಘಟನೆಗಳ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವ ಜನರು ಇಲ್ಲಿದ್ದಾರೆ. ನಮ್ಮ ಕಾರ್ಯಾಚರಣೆ ಅವರ ವಿರುದ್ಧ ನಡೆಯುತ್ತಿದೆ’ ಎಂದು ಎನ್‌ಐಎ ಮೂಲವೊಂದು ತಿಳಿಸಿದೆ. ಈ ವರೆಗಿನ ದಾಳಿಯಲ್ಲಿ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.