ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಪ್ರಕರಣ ದಾಖಲಿಸಿದ ಎನ್ಐಎ

ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬುಧವಾರ ಪ್ರಕರಣ ದಾಖಲಿಸಿಕೊಂಡಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಎನ್ಐಎ, ‘ಭಾರತೀಯ ದಂಡ ಸಂಹಿತೆಯ ಸೆಕ್ಷನ್ 452, 302, 153(ಎ), 153(ಬಿ), 295(ಎ), ಹಾಗೂ ‘ಯುಎಪಿ ಕಾಯ್ದೆ–1967’ರ ಸೆಕ್ಷನ್ 16, 18 ಹಾಗೂ 20ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದೆ.
ಉದಯಪುರ ಟೈಲರ್ ಹತ್ಯೆ ಆರೋಪಿಗಳಿಗೆ ವಿದೇಶಿ ನಂಟು: ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್
ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಎನ್ಐಎಗೆ ನಿರ್ದೇಶನ ನೀಡಿತ್ತು. ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆ ಮತ್ತು ಅಂತರರಾಷ್ಟ್ರೀಯ ಸಂಬಂಧದ ಕುರಿತಂತೆ ಎನ್ಐಎ ಸಮಗ್ರ ತನಿಖೆ ನಡೆಸಲಿದೆ ಎಂದು ಗೃಹ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿತ್ತು.
ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಎನ್ಐಎ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ
NIA Registers a Case in the Incident of Brutal Murder of Shri Kanhaiya Lal Teli in Udaipur, Rajasthan pic.twitter.com/YtI48NHSJy
— NIA India (@NIA_India) June 29, 2022
ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು. ಬಳಿಕ ಕೃತ್ಯದ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಬೆದರಿಕೆ ಹಾಕಿದ್ದರು.
ನೂಪುರ್ ಪರ ಪೋಸ್ಟ್: ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಛೇದ, ಪ್ರಧಾನಿಗೂ ಬೆದರಿಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.