ಗುರುವಾರ , ನವೆಂಬರ್ 26, 2020
20 °C

ಉಗ್ರ ಸಂಘಟನೆಗಳಿಗೆ ನೆರವು: ಶ್ರೀನಗರದಲ್ಲಿ ಎನ್‌ಐಎ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕೆ ಮಾಲೀಕರ ಒಡೆತನದ ಟ್ರಸ್ಟ್ ಸೇರಿದಂತೆ ಇಲ್ಲಿನ ಒಂಬತ್ತು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ದಾಳಿ ನಡೆಸಿದೆ.

ಶ್ರೀನಗರದಲ್ಲಿ ಸ್ಥಳೀಯ ಪೊಲೀಸ್‌ ಮತ್ತು ಅರೆ ಸೇನಾಪಡೆಯ ನೆರವಿನೊಂದಿಗೆ ಬುಧವಾರ ಬೆಳಿಗ್ಗೆ ಶೋಧ ಕಾರ್ಯಚರಣೆ ನಡೆಸಲಾಗಿದೆ. ಪ್ರಮುಖ ಇಂಗ್ಲಿಷ್‌ ಪತ್ರಿಕೆ ಕಚೇರಿಯ ಆವರಣದಲ್ಲಿದ್ದ ಟ್ರಸ್ಟ್‌ನ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.

2000ನೇ ಇಸವಿಯಲ್ಲಿ ಸ್ಥಾಪಿಸಲಾದ ಕನಿಷ್ಠ ಮೂರು ಸರ್ಕಾರೇತರ ಸಂಸ್ಥೆಗಳ ಮೇಲೆಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದರು. ಈ ಸರ್ಕಾರೇತರ ಸಂಸ್ಥೆಗಳು ಹೆಸರು ಬಹಿರಂಗಪಡಿಸದ ದಾನಿಗಳಿಂದ ಹಣ ಪಡೆಯುತ್ತಿದ್ದವು. ಈ ಹಣವನ್ನು ಭಯೋತ್ಪಾದನೆ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತು ಎಂದು ಎನ್‌ಎಎ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು