ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಕಚೇರಿ ಶೋಧ: ಮರ್ಸಿಡಿಸ್ ಕಾರು, ನಗದು ವಶ

ಸ್ಪೋಟಕಗಳ ತುಂಬಿದ ವಾಹನ ಪ್ರಕರಣ– ಎನ್‌ಐಎ ಅಧಿಕಾರಿಗಳಿಂದ ತನಿಖೆ
Last Updated 17 ಮಾರ್ಚ್ 2021, 6:10 IST
ಅಕ್ಷರ ಗಾತ್ರ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಪೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಕಚೇರಿಯಲ್ಲಿ ಶೋಧ ನಡೆಸಿರುವ ಎನ್‌ಐಎ ಅಧಿಕಾರಿಗಳು, ಅವರು ಬಳಸುತ್ತಿದ್ದ ಮರ್ಸಿಡಿಸ್ ಕಾರು, ನಗದು ಹಾಗೂ ಮತ್ತಿತರ ಮಹತ್ವದ ದಾಖಲೆಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ, ವಾಜೆ ಕಚೇರಿಯಿಂದ ಕೆಲವೊಂದು ದೋಷಾರೋಪಣೆಯದಾಖಲೆಗಳು ಮತ್ತು ಲ್ಯಾಪ್‌ಟಾಪ್‌, ಐಪಾಡ್ ಮತ್ತು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದೆ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಗಳು ತಿಳಿಸಿದ್ದಾರೆ.

‘ವಾಜೆ ಬಳಸುತ್ತಿದ್ದ ಕಪ್ಪು ಬಣ್ಣದ ಮರ್ಸಿಡಿಸ್ ಕಾರನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ) ಬಳಿಯ ವಾಹನ ನಿಲುಗಡೆ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು, ₹ 5 ಲಕ್ಷ ನಗದು, ನೋಟ್ ಎಣಿಸುವ ಯಂತ್ರ, ಎರಡು ನಂಬರ್ ಪ್ಲೇಟ್‌ಗಳು ಮತ್ತು ಕೆಲವು ವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ‘ ಎಂದು ಎನ್ಐಎ ಇನ್‌ಸ್ಪೆಕ್ಟರ್‌ ಜನರಲ್ ಅನಿಲ್ ಶುಕ್ಲಾ ಹೇಳಿದರು.

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ವಾಜೆ ಅವರನ್ನು ಮಾ. 13ರಂದು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT