ಶುಕ್ರವಾರ, ಸೆಪ್ಟೆಂಬರ್ 25, 2020
22 °C
ಕೇರಳ: ಅಕ್ರಮ ಚಿನ್ನ ಸಾಗಣೆ ಪ್ರಕರಣ

ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್‌ಗೆ ಜಾಮೀನು ನಿರಾಕರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಎನ್‌ಐಎ ಅಧಿಕಾರಿಗಳು ಸಲ್ಲಿಸಿದ್ದ ಪ್ರಕರಣದ ಪೂರ್ಣ ವಿವರವನ್ನು ಪರಿಶೀಲಿಸಿದ ನ್ಯಾಯಾಲಯ,’ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಎನ್‌ಐಎ ಅಧಿಕಾರಿಗಳು ನೀಡಿರುವ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಬೇಕು’ ಎಂದು ತಿಳಿಸಿ, ಸ್ವಪ್ನಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

’ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಕಪೋಕಲ್ಪಿತವಾಗಿ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ವಿಚಾರವೂ ಸೇರಿಕೊಂಡಿದೆ. ಹೀಗಾಗಿ ನನಗೆ ಜಾಮೀನು ನೀಡಬೇಕೆಂದು’ ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯಲ್ಲಿ ಮನವಿ ಮಾಡಿದ್ದರು.

ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನು ಬಂಧಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು