ಬುಧವಾರ, ಆಗಸ್ಟ್ 17, 2022
25 °C

Covid-19| ಅಹಮದಾಬಾದ್‌ನಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ ನಗರದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಮುಂದಿನ ಆದೇಶದ ತನಕ ವಿಸ್ತರಿಸಲಾಗಿದೆ.

ಅಹಮದಾಬಾದ್‌ನಲ್ಲಿ ಭಾನುವಾರ 306 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52,030ಕ್ಕೆ ಏರಿಕೆಯಾಗಿದೆ.

ಈ ಹಿಂದೆಯೂ ನವೆಂಬರ್‌ 23 ರಂದು ಜಾರಿಗೆ ತರಲಾದ ರಾತ್ರಿ ಕರ್ಫ್ಯೂವನ್ನು ಡಿಸೆಂಬರ್‌ 7 ರ ತನಕ ವಿಸ್ತರಿಸಲಾಗಿತ್ತು.

ಇದೀಗ, ಮುಂದಿನ ಆದೇಶದವರೆಗೆ ನಗರದಲ್ಲಿ ಹೇರಲಾಗಿರುವ ರಾತ್ರಿ ಕರ್ಫ್ಯೂವನ್ನು ವಿಸ್ತರಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಸಂಜಯ್‌ ಶ್ರೀವಾಸ್ತವ್‌ ಅವರು ಸೋಮವಾರ ಬಿಡುಗಡೆಗೊಳಿಸಿರುವ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಆದೇಶದ ತನಕ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ತನಕ ಕರ್ಫ್ಯೂ ಇರಲಿದೆ. ಈ ಸಮಯದಲ್ಲಿ ಜನರು ಮನೆಯೊಳಗೆ ಇರಬೇಕು. ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಬಾರದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಪೊಲೀಸ್‌ ಸಿಬ್ಬಂದಿ, ಪೌರ ರಕ್ಷಣಾ ದಳ, ಕೇಂದ್ರ ಸಶಸ್ತ್ರ ಪೊಲೀಸ್‌ ಮೀಸಲು ಪಡೆ, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕರು, ಮಾಧ್ಯಮಗಳು, ಎಟಿಎಂ ಕಾರ್ಯಾಚರಣೆ, ಖಾಸಗಿ ಭದ್ರತಾ ಸಂಸ್ಥೆಗಳ ಸಿಬ್ಬಂದಿ, ಹಾಲು ಮತ್ತು ನೀರಿನ ವಿತರಣೆ, ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಎಲ್‌ಪಿಜಿ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಸೆಕ್ಷನ್ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು