ಮುಂಬೈ: ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಮಹಾರಾಷ್ಟ್ರ ಸರ್ಕಾರ ಭಾನುವಾರ (ಮಾರ್ಚ್ 28) ದಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹೇರಲಾಗುವುದು ಎಂದು ಹೇಳಿದೆ.

ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಕೋವಿಡ್-19 ಹರಡುವಿಕೆಯನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು 'ಕಟ್ಟುನಿಟ್ಟಾಗಿ ಜಾರಿಗೊಳಿಸಲು' ಮುಖ್ಯಮಂತ್ರಿ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದಲ್ಲದೆ, ಆಯ್ದ ಪ್ರದೇಶಗಳಲ್ಲಿ ಸಂಭವನೀಯ ಲಾಕ್‌ಡೌನ್ ಅನ್ನು ತಳ್ಳಿಹಾಕುವಂತಿಲ್ಲ ಎನ್ನಲಾಗಿದೆ.

ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂಗೆ ಸಂಬಂಧಿಸಿದ ಮಾರ್ಗಸೂಚಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7ರವರೆಗೆ ಎಲ್ಲಾ ಮಾಲ್‌ಗಳು ಮುಚ್ಚಲ್ಪಡುತ್ತವೆ.

'ಕೊರೊನಾ ವೈರಸ್‌ನಿಂದ ಅಪಾಯ ಎದುರಾಗುವುದು ಮುಗಿದಿಲ್ಲ. ಇದಕ್ಕೆ ಬದಲಾಗಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ಲಾಕ್‌ಡೌನ್ ವಿಧಿಸಬಹುದು. ಆದರೆ ಅವರು ಮೊದಲೇ ಜನರಿಗೆ ಸಾಕಷ್ಟು ಸಮಯವನ್ನು ನೀಡಬೇಕಾಗುತ್ತದೆ' ಎಂದಿದ್ದಾರೆ.

'ಹೆಚ್ಚುತ್ತಿರುವ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ. ಲಾಕ್‌ಡೌನ್ ಹೇರಲು ನಾನು ಬಯಸುವುದಿಲ್ಲ. ಆದಾಗ್ಯೂ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳು ಕಡಿಮೆಯಾಗಬಹುದು ಎಂದು ಎಚ್ಚರಿಸಿರುವ ಅವರು, ಎಲ್ಲಾ ಜಿಲ್ಲೆಗಳಲ್ಲಿ ತಮ್ಮ ಆರೋಗ್ಯ ಮೂಲಸೌಕರ್ಯ ಮತ್ತು ಹಾಸಿಗೆಯ ಬಲವನ್ನು ಹೆಚ್ಚಿಸಿಕೊಳ್ಳಬೇಕು' ಎಂದು ಹೇಳಿದ್ದಾರೆ.

ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ನಗರಸಭೆ ಆಯುಕ್ತರು, ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ನಾಗರಿಕ ಶಸ್ತ್ರಚಿಕಿತ್ಸಕರು ಮತ್ತು ಕೋವಿಡ್ -19 ಕಾರ್ಯಪಡೆಯ ಸದಸ್ಯರು ಹಾಜರಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾಜೇಶ್ ತೋಪೆ, ವೈದ್ಯಕೀಯ ಶಿಕ್ಷಣ ಸಚಿವ ಅಮಿತ್ ದೇಶ್‌ಮುಖ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.