ಪಾಕಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 9 ಸಾವು

ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಒಂಭತ್ತು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಒರಾಕ್‌ಜೈ ಬುಡಕಟ್ಟು ಜಿಲ್ಲೆಯ ಡೋಲಿ ಕಲ್ಲಿದ್ದಲು ಗಣಿಯಲ್ಲಿ 13 ಮಂದಿ ಕಾರ್ಮಿಕರು ಬುಧವಾರ ಕೆಲಸ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಗಣಿಯಲ್ಲಿ ಅನಿಲದ ಕಿಡಿಗಳು ಹೊರಸೂಸಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ನಾಜಿರ್ ಖಾನ್ ತಿಳಿಸಿದ್ದಾರೆ.
ಗುತ್ತಿಗೆದಾರ ಸೇರಿದಂತೆ ಒಂಭತ್ತು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಗೊಂಡಿರುವವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕೆಡಿಎ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅದ್ನಾನ್ ಖಾನ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.