ಸೋಮವಾರ, ಮೇ 23, 2022
20 °C

ಛತ್‌ ಪೂಜೆ ಮುಗಿಸಿ ಆಟೊದಲ್ಲಿ ಹೊರಟವರಿಗೆ ಲಾರಿ ಡಿಕ್ಕಿ: ಹತ್ತು ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ದಕ್ಷಿಣ ಅಸ್ಸಾಂನ ಹೈಲಕಂಡಿ ಜಿಲ್ಲೆಯ ಬೈತಖಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮತ್ತು ಆಟೊ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಹತ್ತು ಮಂದಿ ಮೃತಪಟ್ಟಿದ್ದಾರೆ.

ಮೃತರು ಛತ್‌ ಪೂಜೆ ಮುಗಿಸಿ ಆಟೊ ರಿಕ್ಷಾದಲ್ಲಿ ಕರೀಂಗಂಜ್‌ ಕಡೆಗೆ ತೆರಳುತ್ತಿದ್ದಾಗ, ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಕರೀಂಗಂಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ. ಮೃತರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು