ಸಿದ್ದಾರ್ಥನಗರ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉತ್ತರ ಪ್ರದೇಶದಲ್ಲಿ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು.

ಸಿದ್ಧಾರ್ಥನಗರ, ಇಟಾಹ್, ಹರ್ಡೋಯ್, ಪ್ರತಾಪಗಡ, ಫತೇಪುರ್, ಡಿಯೋರಿಯಾ, ಗಾಜಿಪುರ, ಮಿರ್ಜಾಪುರ ಮತ್ತು ಜೌನ್ಪುರ ಜಿಲ್ಲೆಗಳಲ್ಲಿ ₹2, 329 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಿ ಮೋದಿಯವರು ಸಿದ್ಧಾರ್ಥನಗರದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಜಿಲ್ಲಾ ಅಥವಾ ರೆಫರಲ್ ಆಸ್ಪತ್ರೆಗಳ ಜೊತೆಗೆ ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ಇವುಗಳಲ್ಲಿ ಜೌನ್‌ಪುರದಲ್ಲಿನ ಒಂದು ವೈದ್ಯಕೀಯ ಕಾಲೇಜನ್ನು ರಾಜ್ಯ ಸರ್ಕಾರವು ತನ್ನ ಸ್ವಂತ ಸಂಪನ್ಮೂಲಗಳ ಮೂಲಕ ಕಾರ್ಯಗತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರದ ಯೋಜನೆಯಡಿ ಹಿಂದುಳಿದ ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ಆದ್ಯತೆ ನೀಡಲಾಗಿದೆ.

ಆರೋಗ್ಯ ವೃತ್ತಿಪರರ ಲಭ್ಯತೆಯನ್ನು ಹೆಚ್ಚಿಸುವುದು, ವೈದ್ಯಕೀಯ ಕಾಲೇಜುಗಳ ಮಂಜೂರು ಮಾಡುವಲ್ಲಿ ಆಗಿರುವ ಭೌಗೋಳಿಕ ಅಸಮತೋಲನವನ್ನು ಸರಿಪಡಿಸುವುದು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿರುವ ಮೂಲಸೌಕರ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಗುರಿಯನ್ನು ಈ ಯೋಜನೆ ಹೊಂದಿದೆ.

ದೇಶದಾದ್ಯಂತ ಇಲ್ಲಿವರೆಗೆ 157 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ. ಇದರಲ್ಲಿ 63 ಕಾಲೇಜುಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.