ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಇಬ್ಬರು ಬಾಲಕಿಯರ ಅಪಹರಣ- ಓರ್ವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

Last Updated 19 ಆಗಸ್ಟ್ 2022, 14:07 IST
ಅಕ್ಷರ ಗಾತ್ರ

ಗಾಜಿಯಾಬಾದ್‌: ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರನ್ನು ಅಪಹರಿಸಿ, ಓರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಆರೋಪಿ 9 ಮತ್ತು 6 ವರ್ಷದ ಬಾಲಕಿಯರನ್ನು ಅಪಹರಿಸಿದ್ದಾನೆ. ಈ ಪೈಕಿ ಓರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

9 ವರ್ಷದ ಬಾಲಕಿಯ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ಬಟ್ಟೆಯೆಲ್ಲ ರಕ್ತಮಯಗೊಂಡಿತ್ತು. 6 ವರ್ಷದ ಬಾಲಕಿ ಅಪಹರಣಕಾರನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯರ ಗ್ರಾಮದ ನಿವಾಸಿಯೇ ಆಗಿದ್ದ ಆರೋಪಿ ಅವರನ್ನು ಪುಸಲಾಯಿಸಿ ಸೈಕಲ್‌ನಲ್ಲಿ ಕರೆದೊಯ್ದು ಕೃತ್ಯ ಎಸಗಿದ್ದಾನೆ. ಬಾಲಕಿಯರಿಬ್ಬರು ಸಹೋದರಿಯರು.

ಆರೋಪಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮುನಿರಾಜ್‌ ಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT