ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ: ಯುವತಿ ಆತ್ಮಹತ್ಯೆ

Last Updated 8 ಸೆಪ್ಟೆಂಬರ್ 2022, 14:03 IST
ಅಕ್ಷರ ಗಾತ್ರ

ಚೆನ್ನೈ: ನೀಟ್ ಪರೀಕ್ಷೆಯಲ್ಲಿ ‌ಅನುತ್ತೀರ್ಣಳಾದಹಿನ್ನೆಲೆಯಲ್ಲಿ 19 ವರ್ಷದ ಯುವತಿ ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೈದ್ಯೆಯಾಗುವ ಕನಸು ಹೊತ್ತು ವೈದ್ಯಕೀಯ ಕಾಲೇಜಿಗೆ ಪ್ರವೇಶಿಸಲು ಆಶಿಸಿದ್ದರು. ಆದರೆ, ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಿಲ್ಲ ಎಂದು ತಿಳಿದು ನಂತರ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಂಬತ್ತೂರು ಸಮೀಪದ ತಿರುಮುಲ್ಲೈವೊಯಲ್‌ನ ಲಕ್ಷ್ಮಣ ಶ್ವೇತಾ ಎಂಬುವರು ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

’ಮೇಲ್ನೋಟಕ್ಕೆ ಶ್ವೇತಾ ಅವರ ಸಾವು ಆತ್ಮಹತ್ಯೆ ಎಂದು ತೋರುತ್ತಿದ್ದು, ತನಿಖೆಗೆ ಆದೇಶಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT