ಬುಧವಾರ, ಮೇ 18, 2022
25 °C

ವಂಚನೆ ಪ್ರಕರಣದ ಆರೋಪಿ ನೀರವ್‌ ಮೋದಿ ಸಹಾಯಕ ಸಿಬಿಐ ಕಸ್ಟಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ₹13,000 ಕೋಟಿ ವಂಚನೆ ಪ್ರಕರಣದ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿಯ ಸಹಾಯಕ ಸುಭಾಷ್ ಶಂಕರ್ ಪರಬ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಏಪ್ರಿಲ್ 26 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.

ಈಜಿಪ್ಟ್‌ನ ಕೈರೋದಿಂದ ಪರಬ್‌ ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಮಂಗಳವಾರ ಬೆಳಿಗ್ಗೆ ಅವರನ್ನು ಭಾರತಕ್ಕೆ ಕರೆತರಲಾಗಿದ್ದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಸಿ.ಬಾರ್ಡೆ ಅವರ ಮುಂದೆ ಹಾಜರುಪಡಿಸಲಾಯಿತು. ನಂತರ ಅವರನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಲಾಯಿತು.

‘ಪರಬ್‌ ಅವರು ನೀರವ್ ಮೋದಿಗೆ ಸಂಬಂಧಿಸಿರುವ ಫೈರ್‌ಸ್ಟಾರ್ ಡೈಮಂಡ್‌ ಸಂಸ್ಥೆಯಲ್ಲಿ ಹಣಕಾಸು ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾಗಿದ್ದರು. ಮೋದಿ ಎಸಗಿರುವ ವಂಚನೆ ಬೆಳಕಿಗೆ ಬರುವ ಮುನ್ನವೇ ಪರಬ್‌ ದೇಶ ತೊರೆದಿದ್ದರಿಂದ ಅವರನ್ನು ಪ್ರಕರಣಕ್ಕೆ ಅಗತ್ಯವಾಗಿ ಬೇಕಿರುವ ಆರೋಪಿ’ ಎಂದು ತೋರಿಸಲಾಗಿದೆ.

‘ಪರಬ್‌ ಅವರು ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾರೆ. ಅವರನ್ನು ಪತ್ತೆಹಚ್ಚಲು ಮತ್ತು ಮರಳಿ ಕರೆತರಲು ಭಾರತ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್‌ ನೋಟಿಸು ಜಾರಿಗೊಳಿಸಿತ್ತು’ ಎಂದು ಅಧಿಕಾರಿಗಳು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.