ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ಸಚಿವೆ ನಿರ್ಮಲಾ

Last Updated 17 ಸೆಪ್ಟೆಂಬರ್ 2022, 10:51 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಲಹೆ ನೀಡಿದ್ದಾರೆ.

ಮುಂಬೈನಲ್ಲಿ ನಡೆದ ಭಾರತೀಯ ಬ್ಯಾಂಕ್‌ ಒಕ್ಕೂಟದ 75ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ ಮಾತನಾಡಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯ ಭಾಷೆ ಗೊತ್ತಿರಬೇಕು ಎಂಬುದನ್ನು ಉಲ್ಲೇಖಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತ ವೈವಿಧ್ಯಗಳನ್ನು ಹೊಂದಿರುವ ರಾಷ್ಟ್ರವಾಗಿರುವುದರಿಂದ ಬ್ಯಾಂಕ್‌ ಸಿಬ್ಬಂದಿಗಳಿಗೆ ಸ್ಥಳೀಯ ಭಾಷೆ ಗೊತ್ತಿರಬೇಕಾದದ್ದು ಅಗತ್ಯ ಎಂದು ಸೀತಾರಾಮನ್‌ ಪ್ರತಿಪಾದಿಸಿರುವುದಾಗಿ 'ಹಿಂದೂ ಬ್ಯುಸಿನೆಸ್‌ ಲೈನ್‌' ವರದಿ ಮಾಡಿದೆ.

ಸ್ಥಳೀಯ ಬ್ರಾಂಚ್‌ಗಳ ಸಿಬ್ಬಂದಿ ಸ್ಥಳೀಯ ಭಾಷೆಯನ್ನು ಮಾತನಾಡುವುದಿಲ್ಲ. ಬದಲಾಗಿ ದೇಶಭಕ್ತಿಯ ಪಾಠ ಹೇಳುತ್ತಾರೆ. 'ನಿಮಗೆ ಹಿಂದಿ ಗೊತ್ತಿಲ್ಲವೇ? ನೀವು ಭಾರತೀಯನಲ್ಲದಿರಬಹುದು' ಎಂದು ಹೇಳುವುದರಿಂದ ಯಾವುದೇ ಉತ್ತಮ ವ್ಯವಹಾರ ನಡೆಸಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ನಡುವೆ ಗೋಡೆಗಳು ನಿರ್ಮಾಣಗೊಂಡಿವೆ. ಎಲ್ಲ ಕೆಲಸವೂ ಆನ್‌ಲೈನ್‌ನಲ್ಲೇ ನಡೆಯುತ್ತದೆ ಎಂದು ಪರಸ್ಪರ ಮಾತನಾಡುವುದು ಕಡಿಮೆಯಾಗುತ್ತಿದೆ. ಸಿಬ್ಬಂದಿಗಳು ಗ್ರಾಹಕರ ಹಿತದೃಷ್ಟಿಯಿಂದ ಮಾತನಾಡಬೇಕು ಎಂದು ಸೀತಾರಾಮನ್‌ ಇದೇ ವೇಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT