ಸೋಮವಾರ, ಸೆಪ್ಟೆಂಬರ್ 26, 2022
24 °C

ಉಪ ರಾಷ್ಟ್ರಪತಿಯಾಗಲು ನಿತೀಶ್‌ ಬಯಸಿದ್ದರು: ಬಿಜೆಪಿ ನಾಯಕ ಸುಶೀಲ್ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎನ್‌ಡಿಎ ಮೈತ್ರಿ ತೊರೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಉಪ ರಾಷ್ಟ್ರಪತಿಯಾಗಲು ಬಯಸಿದ್ದರು ಎಂದು ಬಿಜೆಪಿ ನಾಯಕ ಸುಶೀಲ್‌ ಕುಮಾರ್‌ ಮೋದಿ ತಿಳಿಸಿದ್ದಾರೆ.

ಉಪ ರಾಷ್ಟ್ರಪತಿಯಾಗುವ ಮಹತ್ವಾಕಾಂಕ್ಷೆಗೆ ಬಿಜೆಪಿ ಸಹಕರಿಸದ ಕಾರಣ ನಿತೀಶ್‌ ಅವರು ಎನ್‌ಡಿಎ ತೊರೆದರೆಂದು  ಸುಶೀಲ್ ಮೋದಿ ಬುಧವಾರ ಆರೋಪಿಸಿದ್ದಾರೆ.

ಮೋದಿ ಆರೋಪವನ್ನು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಅವರು ತಳ್ಳಿಹಾಕಿದ್ದಾರೆ. 

ನಿತೀಶ್‌ ಅವರು 2017ರ ವರೆಗೆ ಮಹಾಮೈತ್ರಿಕೂಟದ ಭಾಗವಾಗಿಯೇ ಇದ್ದರು. ಆದರೆ, 2017ರಲ್ಲಿ ಮಹಾಮೈತ್ರಿಕೂಟ ತೊರೆದು ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿಕೊಂಡರು. ಮಹಾಮೈತ್ರಿಕೂಟಕ್ಕೆ ಸೇರುವ ಮೊದಲೂ ಅವರು ಎನ್‌ಡಿಎಯಲ್ಲಿಯೇ ಇದ್ದರು. 

ಈಗ, 9 ವರ್ಷಗಳಲ್ಲಿ ಎರಡನೇ ಬಾರಿಗೆ ಬಿಜೆಪಿ ಜತೆಗಿನ ನಂಟನ್ನು ಅವರು ಕಡಿದುಕೊಂಡಿದ್ದಾರೆ. ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂದು ಬಿಜೆಪಿ 2013ರಲ್ಲಿ ನಿರ್ಧರಿಸಿದಾಗ ನಿತೀಶ್‌ ಅವರು ಎನ್‌ಡಿಎ ತೊರೆದಿದ್ದರು. 

ಇವನ್ನೂ ಓದಿ: 

 ಮತ್ತೆ ಎನ್‌ಡಿಎ ತೊರೆದ ನಿತೀಶ್‌: ಸಿ.ಎಂ ಆಗಿ ಇಂದು ಪ್ರಮಾಣ

    ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

    ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

    ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

    ಈ ವಿಭಾಗದಿಂದ ಇನ್ನಷ್ಟು