ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ರಾಜಕೀಯ: ಸೋನಿಯಾ, ರಾಹುಲ್ ಗಾಂಧಿಗೆ ನಿತೀಶ್ ಕುಮಾರ್ ಧನ್ಯವಾದ

Last Updated 9 ಆಗಸ್ಟ್ 2022, 16:32 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ಮಹಾ ಮೈತ್ರಿಕೂಟ (ಮಹಾಘಟಬಂಧನ) ಜತೆಗೂಡಿ ನೂತನ ಸರ್ಕಾರ ರಚಿಸಲು ಮುಂದಾಗಿರುವ ಜೆಡಿ(ಯು) ನಾಯಕ ನಿತೀಶ್ ಕುಮಾರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ಬಳಿಕ ಸರ್ಕಾರ ರಚನೆಗೆ ಬೆಂಬಲ ನೀಡಿದ್ದಕ್ಕಾಗಿ ನಿತೀಶ್ ಅವರು ಪಕ್ಷದ ವರಿಷ್ಠರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.

ಭಾನುವಾರ ರಾತ್ರಿಯೇ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ನಿತೀಶ್ ಕುಮಾರ್, ಬಳಿಕ ಬಿಜೆಪಿ ಜತೆಗಿನ ಮೈತ್ರಿ ತೊರೆಯುವ ನಿರ್ಧಾರ ಕೈಗೊಂಡಿದ್ದರು.

ಮಹಾಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನಾಳೆ (ಬುಧವಾರ) ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT